ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು
ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು.
ಸ್ನೇಹಿತ ಗೌತಮ್ ಸಹೋದರಿ ಹೆರಿಗೆ ಆಗಿದ್ದು, ಚಿರಂಜೀವಿ ಸೇರಿದಂತೆ ಎಂಟು ಮಂದಿ ಶಿವಮೊಗ್ಗದ ಸೀಗೆಹಟ್ಟಿಯಿಂದ ತಾಯಿ-ಮಗುವನ್ನು ನೋಡಲು ಯಡವಾಲಕ್ಕೆ ಸಂಜೆ ಬೈಕ್ ನಲ್ಲಿ ತೆರಳಿದ್ದರು. ನಂತರ ಎಲ್ಲರೂ ಗೌತಮ್ ಅವರ ಯಡವಾಲದ ತೋಟದ ಮನೆಗೆ ತೆರಳಿ ಅಲ್ಲಿ ಪಾರ್ಟಿ ಮಾಡಲು ಮುಂದಾಗಿದ್ದರು.
ಅಲ್ಲಿಯೇ ಅಡುಗೆ ಮಾಡಿ ಪಾನಗೋಷ್ಠಿ ಕೂಡ ನಡೆಸಿದ್ದರು. ಈ ವೇಳೆ ಚಿರಂಜೀವಿ ಬಹಿರ್ದೆಸೆಗೆ ಹೋಗಲು ಮುಂದಾಗಿದ್ದು, ಆತನನ್ನು ಗೌತಮ್ ಕರೆದೊಯ್ದಿದ್ದಾನೆ. ಪಕ್ಕದಲ್ಲಿ ಗೌತಮ್ ಚಿಕ್ಕಪ್ಪನ ಜಮೀನಿನಲ್ಲಿದ್ದ ಕೃಷಿ ಹೊಂಡದಿಂದ ನೀರು ತೆಗೆದುಕೊಳ್ಳುವಾಗ ಚಿರಂಜೀವಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಗೌತಮ್ ಕೂಡ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಕುಂಸಿ ಠಾಣೆ ಪೊಲೀಸರು, ಭಾನುವಾರ ಶವಗಳನ್ನು ಕೃಷಿ ಹೊಂಡದಿಂದ ಮೇಲೆ ತೆಗೆದಿದ್ದಾರೆ. ಮೃತ ಯುವಕರ ಕುಟುಂಬದವರ ರೋದನೆ ಮುಗಿಲುಮುಟ್ಟಿತ್ತು.
ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…