ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ
ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಆನಂದಪುರ ಠಾಣೆಗೆ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ.!? ಈ ಸುದ್ದಿ ನೋಡಿ
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.
ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ಅನಂದಪುರ ಪೊಲೀಸ್ ಠಾಣೆಗೆ ತತ್ತಕ್ಷಣ ವರ್ಗಾವಣೆಗೊಳಿಸಲಾಗಿದ್ದು , ಆನಂದಪುರ ಪಿಎಸ್‌ಐ ಯುವರಾಜ್ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪಿಎಸೈ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಜು ರೆಡ್ಡಿ ಬೆನ್ನೂರು ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಇನ್ನೂ ಕಾರ್ಗಲ್ ಪೊಲೀಸ್ ಇನ್ಸ್ ಪೆಕ್ಟರ್ ಹೊಳೆಬಸಪ್ಪ ಹೊಳಿ ರವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು ಕಾರ್ಗಲ್ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸೊರಬ ಪೊಲೀಸ್ ಠಾಣೆಯ ನಾಗರಾಜ್ ರವರನ್ನು ವರ್ಗಾವಣೆಗೊಳಿಸಲಾಗಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯ ಮಂಜುನಾಥ್ ಕುರಿ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.
ಆಗುಂಬೆ ಠಾಣೆಯ ರಂಗನಾಥ್ ಅಂತರಗಟ್ಟಿ ರವರನ್ನು ಹಾವೇರಿ ಜಿಲ್ಲೆಯ ಸವಣೂರು ಠಾಣೆಗೆ ವರ್ಗಾಯಿಸಲಾಗಿದೆ.ಶಿವಮೊಗ್ಗದ ಸಿ ಇಎನ್ ಠಾಣೆಯ ಶಿವನಗೌಡರವರನ್ನು ಆಗುಂಬೆ ಠಾಣೆಗೆ ವರ್ಗಾಯಿಸಲಾಗಿದೆ.
ಭದ್ರಾವತಿ ಓಲ್ಡ್ ಟೌನ್ ಪಿಎಸ್‌ಐ ಚಂದ್ರಶೇಖರ್ ನಾಯ್ಕ್ ರವರನ್ನು ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ವಿನೋಬನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಿ ಸಿ ರವರನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…