SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!
ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ.
ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷದ ಮಾತ್ರೆಗಳನ್ನು ಸೇವಿಸಿ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ.
ಯುವತಿ ನನ್ನನ್ನು ನಂಬಿಸಿ ಮೋಸ ಮಾಡಿದ್ದಾಳೆ. ನಾನು ಅವಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, ಆದರೂ ಆಕೆಯನ್ನು ನಾನು ಮದುವೆಯಾಗಲು ನಿರ್ಧರಿಸಿದ್ದೆ, ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ. ಅಲ್ಲದೇ ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿದೆ ಎಂದು ಯುವಕ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ನಾನು ಪ್ರೀತಿಸಿದ ಯುವತಿಯೇ ಕಾರಣ ಎಂದು ಯುವಕ ಸೆಲ್ಫಿ ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯುವತಿ ಹಾಗೂ ಅವರ ಮನೆಯವರೇ ಕಾರಣ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ .
ಮಂಜುನಾಥ್ ರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…