ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ
ಮಲೆನಾಡು ಕರಾವಳಿ ಸಂಪರ್ಕದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ.
ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳ ಅವಿರತ ಶ್ರಮದಿಂದ ಘಾಟಿ ಸಂಚಾರಕ್ಕೆ ಮುಕ್ತಗೊಂಡಿದೆ.
ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿರುವ ಹೇರ್ ಪಿನ್ ತಿರುವಿನಲ್ಲಿ ಭಾರೀ ಗಾತ್ರದ ಲಾರಿಯೊಂದು ಕೆಟ್ಟು ನಿಂತಿದ್ದು, ಇತರ ವಾಹನಗಳು ಸಂಚಾರಕ್ಕೆ ಅಡ್ಡಿಯಾಗಿದೆ. ಈ ಕಿರಿದಾದ ಮತ್ತು ತೀಕ್ಷ್ಣವಾದ ತಿರುವು ದೊಡ್ಡ ವಾಹನಗಳು ಸಾಗಲು ಸಾಧ್ಯವಾಗಲಿಲ್ಲ, ಘಾಟಿ ಹತ್ತುವ ಹಾಗೂ ಘಾಟಿಯಿಂದ ಇಳಿಯುವ ವಾಹನಗಳು ರಸ್ತೆ ಬದಿಯಲ್ಲಿ ಮಧ್ಯರಾತ್ರಿಯಿಂದಲೇ ನಿಂತಿತ್ತು
ಸರಕು ಸಾಗಿಸುತ್ತಿದ್ದ ಲಾರಿ ಸಿದ್ದಾಪುರಕ್ಕೆ ಹೊರಟಿತ್ತು, ಈ ಮಧ್ಯೆ ತಿರುವಿನಲ್ಲಿ ಆಕ್ಸಲ್ ಕಟ್ ಆಗಿ ನಿಂತಿದೆ. ಉಳಿದ ಉಳಿದ ವಾಹನಗಳು ಸಂಚರಿಸುತ್ತಿರಲಿಲ್ಲ, ಮಧ್ಯರಾತ್ರಿಯಿಂದಲೇ ಸಂಚಾರ ನಿಲುಗಡೆಯಾಗಿರುವುದು ಹಲವು ವಾಹನಗಳು, ವಿಶೇಷವಾಗಿ ಸರಕು ಸಾಗಣೆ ಲಾರಿಗಳು ಮಾರ್ಗ ಮಧ್ಯದಲ್ಲೇ ಸಿಲುಕಿತ್ತು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…