w
Headlines
Home » RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

GridArt 20250623

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸ ಚಂದ್ರಪ್ಪ,ಕೆಡಿಪಿ ಸದಸ್ಯರಾದ ಚಂದ್ರೇಶ್ , ಆಸೀಫ಼್ ಬಾಷಾ,ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ ಮಳವಳ್ಳಿ,ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದ್ದಾಂ ದೊಡ್ಮನೆ, ಮುಖಂಡರಾದ ಡಿ.ಈ.ಮಧುಸೂದನ್, ಧನಲಕ್ಷ್ಮಿ, ಸಾಕಮ್ಮ, ಪ್ರಕಾಶ ಪಾಲೇಕರ್, ಗಣಪತಿ ಗವಟೂರು, ಬಿ.ಎಸ್.ಎನ್.ಎಲ್. ಶ್ರೀಧರ, ನವೀನ್‌ ಕೆರೆಹಳ್ಳಿ, ಹರ್ಷಕುಮಾರ್, ಉಬೇದುಲ್ಲಾ ಹೊಸನಗರ, ನವೀನ ಹಾರೋಹಿತ್ತಲು, ಖಲೀಲ್ ಷರೀಫ್‌ ಗಾಳಿಬೈಲು, ಮೋಹಿದ್ದೀನ್ ಇದ್ದರು.

ಪ್ರತಿಭಟನೆಯ ನಂತರ ಉಪತಹಶೀಲ್ದಾರ್ ಗೌತಮ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.