Headlines

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು.

ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ ಮಾಹಿತಿಗಳನ್ನು ಪೊಲೀಸರ ಬಳಿ ಹಂಚಿಕೊಳ್ಳಬಹುದು’ ಎಂದು ನಿವಾಸಿಗಳಿಗೆ ವಿವರಿಸಿದರು.

ಈ ಸಂಧರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪಿಎಸ್‌ಐ ರಾಜುರೆಡ್ಡಿ ‘ಜನರೊಂದಿಗೆ ಸಮನ್ವಯ ಸಾಧಿಸಲು ಇದು ಉತ್ತಮ ಕಾರ್ಯಕ್ರಮವಾಗಿದೆ. ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಭಿಪ್ರಾಯವನ್ನು ಉತ್ತಮಗೊಳಿಸಲು ಈ ಕಾರ್ಯಕ್ರಮ ಅನುಕೂಲವಾಗಿದೆ, ‘ಜನ ಸಾಮಾನ್ಯರು ಕಷ್ಟದ ಸಮಯದಲ್ಲಿ ಬಳಸಬಹುದಾದ ತುರ್ತು ಕರೆಗಳ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ , ಅವಿನಾಶ್ ಹಾಗೂ ಗ್ರಾಮಸ್ಥರು ಇದ್ದರು.

Exit mobile version