ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ
ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪವನ್ ಶಿವಕುಮಾರ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನೆ ನಡೆದ ಬೆನ್ನಲ್ಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶಿವಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.