ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ ಸಾವು
ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ ಬೆಳಕೋಡು ನಿವಾಸಿ ಲೋಕೇಶ್ (೪೫) ಎಂದು ಗುರುತಿಸಲಾಗಿದೆ.
ಲೋಕೇಶ್ ತಮ್ಮ ಪತ್ನಿಯ ತವರು ಮನೆಯಾದ ಹುಂಚದಕಟ್ಟೆಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.