Headlines

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೋಣಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.