ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ
ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ ಕುಂಸಿ ಪೊಲೀಸರು ಬಂಧಿಸಿದ್ದಾರೆ.
ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ ತಂದೆ ಮಲ್ಲೇಶಪ್ಪ, (23) ಹಾಗೂ ಆಕಾಶ್ ತಂದೆ ಮಲ್ಲೇಶಪ್ಪ, (21) ಇವರನ್ನು ವಶಕ್ಕೆ ಪಡೆಯಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಿಥುನ್ ಕುಮಾರ್ ಐ.ಪಿ.ಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಮತ್ತು ಅನಿಲ್ ಕುಮಾರ್ ಭೂಮಾರೆಡ್ಡಿ 1ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಮತ್ತು ಕಾರಿಯಪ್ಪ ಎ.ಜಿ 2ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ರವರ ಮಾರ್ಗದರ್ಶದಲ್ಲಿ ವಿಶೇಷ ತಂಡವನ್ನು ಶ್ರೀ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪವಿಭಾಗರವರ ಸಾರಥ್ಯದಲ್ಲಿ ರಚಿಸಿ, ಆ ವಿಶೇಷ ತಂಡದಲ್ಲಿ ಕುಂಸಿ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ದೀಪಕ್ ಎಂ.ಎಸ್ ಪಿಎಸ್‌ಐ ಶ್ರೀ ಶಾಂತರಾಜ್, ಹಾಗೂ ಕುಂಸಿ ಪೊಲೀಸ್ ಠಾಣಾ ಸಿಬ್ಬಂದಿಯವರಾದ ಸಿಹೆಚ್‌ಸಿ, 400 ಶ್ರೀ ಪ್ರಕಾಶ್, ಸಿಹೆಚ್‌ಸಿ 235 ರಾಘು ಶೇಟ್ಟಿ. ಜೀಪ್ ಚಾಲಕರಾದ ಎ.ಹೆಚ್.ಸಿ 20 ಶಿವಪ್ಪ, ಸಿಪಿಸಿ 1503 ಶ್ರೀ ಶಶಿಧರ ಸಿಪಿಸಿ 1430 ಮಂಜುನಾಥ, ಸಿಪಿಸಿ 1454 ರಘು.ಬಿ. ಸಿಪಿಸಿ 1417 ನಿತೀನ್, ಮತ್ತು ಸಿಪಿಸಿ 1047 ಆದರ್ಶ, ಸಿಪಿಸಿ 1481 ವಿನಾಯಕ ಬಿ.ಟಿ. ಸಿಪಿಸಿ 1422 ಶಶಿಕುಮಾರ್. ಸಿ.ಪಿ.ಸಿ 1875 ಬುರಾನ್, ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ಸಿಬ್ಬಂಧಿಗಳಾದ ಶ್ರೀ ಗುರುರಾಜ. ಶ್ರೀ ಇಂದ್ರೇಶ್, ಮತ್ತು ಶ್ರೀ ವಿಜಯ್ ಕುಮಾರ್ ದಿನೇಶ್ ರಾವ್ ಮತ್ತು ಜಯ್ ಕುಮಾರ್ ರವರನ್ನ ಒಳಗೊಂಡ ತಂಡ ಭರ್ಜರಿ ಬಲೆ ಬೀಸಿತ್ತು.
ಈ ಪ್ರಕರಣದ ಜಾಡನ್ನು ಪತ್ತೆ ಹಚ್ಚಿ, ಪ್ರಕರಣದ ಆರೋಪಿಗಳಾದ ಎl. ಹರೀಶ ತಂದೆ ಮಲ್ಲೇಶಪ್ಪ, (23) ಹಾಗೂ ಎ2 ಆಕಾಶ್ ತಂದೆ ಮಲ್ಲೇಶಪ್ಪ, (21) ಇವರನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಅಮಾನತ್ತು ಪಡಿಸಿಕೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಆರೋಪಿತರ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್