ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ
ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ.
ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪಿಎಸ್‌ಐ, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಪೊಲೀಸ್ ಉಪ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.
ಇವರು 30 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ 2024 ರಲ್ಲಿ ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…