ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ
ಸೊರಬ: ಅಪೂರ್ವ ಪ್ರಾಚೀನ ನರಸಿಂಹ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ತಾಲ್ಲೂಕಿನ ಕುಬಟೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ನರಸಿಂಹ ಕ್ಷೇತ್ರವೆನ್ನಲಾದ ಸೊರಬ ತಾಲ್ಲೂಕಿನಲ್ಲಿ ಅನೇಕ ನರಸಿಂಹ ದೇಗುಲಗಳಿವೆ. ಸುಮಾರು ಎರಡನೇ ಶತಮಾನದಿಂದ ನಾಲ್ಕನೆ ಶತಮಾನದ ಅವಧಿಯ ವಿಗ್ರಹಗಳು ಗಮನಸೆಳೆದಿದ್ದು ಕುಬಟೂರು ವಿಗ್ರಹ ಜಿಲ್ಲೆಯ ಕೆಲವೇ ಕೆಲವು ಪ್ರಾಚೀನ ವಿಗ್ರಹಗಳಲ್ಲಿ ಒಂದು. ಇತಿಹಾಸ ಆರಂಭಿಕ ಹಂತದ ವಿಗ್ರಹಗಳಾಗಿರುವ ಇವು ಕುಳಿತು ಮಣಿಯನ್ನು ಹಿಡಿದಿರುವ ಭಂಗಿಯಲ್ಲಿದ್ದು ಅನೇಕರ ಆರಾಧ್ಯ ದೈವವಾಗಿದೆ. ಯಾವುದೇ ಅನುದಾನ ಇತ್ಯಾದಿ ಬಯಸದೆ ಸ್ವತಃ ದೇಗುಲವನ್ನು ಜೀರ್ಣೋದ್ಧಾರಗೊಳಿಸಿಕೊಂಡ ಇಲ್ಲಿನ ಜನತೆ ವರ್ಷಕ್ಕೊಮ್ಮೆ ವಿಶೇಷ ಪೂಜೆ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಹೀಗಿದ್ದು ಅಪೂರ್ವ ವಿಗ್ರಹ ಹಾಳಾಗಿರುವುದಕ್ಕೆ ನೊಂದುಕೊಂಡಿದ್ದಾರೆ.
ಇಂತಹ ಕಿಡಿಗೇಡಿತನ ಎಸಗಿರುವ ತಪ್ಪಿತಸ್ಥರ ತನಿಖೆ ನಡೆಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
ಭಗ್ನವಾಗಿರುವ ಪ್ರಾಚೀನ ವಿಗ್ರಹದ ರಕ್ಷಣೆಗೆ ಪ್ರಾಚ್ಯ ಇಲಾಖೆ ಮುಂದೆ ಬರಬೇಕು ಎಂದು ದೇಗುಲ ಸಮಿತಿಯವರು ವಿನಂತಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್