ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ
ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ ಶಿಕ್ಷಣವನ್ನು ನೀಡಬೇಕಾಗಿದೆ. ಈ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಟಿ ಎಚ್ ಆರ್ ಕೊಟ್ಟು ಎಫ್ ಅರ್ ಎಸ್ ಮಾಡಬೇಕು. ಮಾತೃವಂದನಾ ಯೋಜನೆಯ ಆನ್ಲೈನ್ ಅರ್ಜಿಗಳನ್ನು ಕಾರ್ಯಕರ್ತರೇ ಹಾಕಬೇಕಿದೆ. ಹೀಗೆ ಇಲಾಖೆಯ ಅನೇಕ ಕೆಲಸ ಕಾರ್ಯ ಮತ್ತು ಸರ್ವೇಗಳನ್ನು ಮಾಡಬೇಕಾಗಿರುವುದರಿಂದ ತಮ್ಮನ್ನು ಕೈಬಿಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಿ ದರ್ಜೆ ನೌಕರರು ಈ ಕೆಲಸ ಮಾಡಬೇಕು ಎಂದಿದೆ. ಆದರೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಸಿ ದರ್ಜೆ ನೌಕರರು ಅಲ್ಲ. ಆದ್ದರಿಂದ ಇವರನ್ನು ಕೈ ಬಿಟ್ಟು ಬಿಎಲ್‌ಓ ಕೆಲಸಕ್ಕೆ ಬೇರೆಯವರನ್ನು ನೇಮಿಸಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಯಶೋದಾ, ತ್ರಿವೇಣಿ ಮೊದಲಾದವರಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…