ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು
ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ.
ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…