POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

GridArt 20250706 124115328 wm

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ.

ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಡಾವಣೆಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಬಡಾವಣೆ ಜನರು ಅನ್ಯಕೋಮಿನ ವ್ಯಕ್ತಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಘಟನೆ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಸಂಜೆ ಸಮಯದಲ್ಲಿ ಈ ಘಟನೆ ನಡೆದಿದೆ. ಬಡಾವಣೆಯಲ್ಲಿ ಪಾರ್ಕ್​ಗೆ ಮೀಸಲು ಇರಿಸಲಾಗಿದ್ದ ಜಾಗದಲ್ಲಿ ಗಣಪತಿ ವಿಗ್ರಹ ಮತ್ತು ನಾಗ ದೇವರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ. ಓರ್ವ ವ್ಯಕ್ತಿ ಬಂದು ದೇವರ ಮೂರ್ತಿ ಎಸೆದು ಅವಮಾನ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದರು.

ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.