w
Headlines
Home » ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

GridArt 20250726

Challenge to save the life of a young woman suffering from brain fever:

ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

Challenge to save the life of a young woman suffering from brain fever: Transportation from Shivamogga to Mumbai by airlift

ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.

ಮೆದುಳು ಜ್ವರದಿಂದ ಬಳಲುತ್ತಿದ್ದ 22 ವರ್ಷದ ಮಾನ್ಯ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.

ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿ ಹಾಗೂ ಮನೋಜ್ ಮನಿಷಾ ದಂಪತಿಯ ಪುತ್ರಿಯಾಗಿರುವ ಮಾನ್ಯಾ, ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.

ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.

ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ ನೀಡಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.