Challenge to save the life of a young woman suffering from brain fever:
ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ
Challenge to save the life of a young woman suffering from brain fever: Transportation from Shivamogga to Mumbai by airlift
ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.
ಮೆದುಳು ಜ್ವರದಿಂದ ಬಳಲುತ್ತಿದ್ದ 22 ವರ್ಷದ ಮಾನ್ಯ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.
ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿ ಹಾಗೂ ಮನೋಜ್ ಮನಿಷಾ ದಂಪತಿಯ ಪುತ್ರಿಯಾಗಿರುವ ಮಾನ್ಯಾ, ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.
ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.
ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ ನೀಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್