ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು.
ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…