ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಶಿವಮೊಗ್ಗ ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್ ಬೆಂಕಿಯಿಂದ ಉರಿಯುತ್ತಿರುವುದು ಕಂಡುಬಂದಿದೆ.
ತಕ್ಷಣವೇ ಕುಟುಂಬದ ಇತರೆ ಸದಸ್ಯರೊಂದಿಗೆ ಸೇರಿಕೊಂಡು ಬೈಕ್ ಗೆ ಹೊತ್ತಿದ್ದ ಬೆಂಕಿ ನಂದಿಸಲಾಗಿದೆ. ಯಾರು ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಓಂಕಾರಪ್ಪ ಅವರು ಮಾಹಿತಿ ನೀಡಿದ್ದಾರೆ.