ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು ಮಹಿಳೆಗೆ ಕರೆ ಮಾಡಿದ್ದಾರೆ. ನಿಮ್ಮ ಗಂಡನ ಹೆಸರಿನಲ್ಲಿ ನೋಂದಾಯಿಸಲಾದ ಸಿಮ್ ಕಾರ್ಡ್ ಅನ್ನು “ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ” ಎಂದು ಹೆದರಿಸಿದ್ದಾರೆ.
ಕರೆಯನ್ನು ಹಲವು ಬಾರಿ ವರ್ಗಾಯಿಸಲಾಯಿತು. ನಂತರ ಕರೆಯನ್ನು ಸಹಾರ್ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ಹೇಳಿದ್ದರು. ಆ ಬಳಿಕ ಅಲ್ಲಿನ ಸಬ್ ಇನ್ಸ್‌ಪೆಕ್ಟರ್ ತಾನು ಎಂದು ಮೋಹನ್ ಕುಮಾರ್ ಎಂಬಾತ ಮಾತನಾಡಿ, ಮಹಿಳೆಯ ವೈಯಕ್ತಿಕ ಮಾಹಿತಿ ಪಡೆದುಕೊಂಡಿದ್ದನು. ಆ ಬಳಿಕ ಕರೆಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ವೆಂಕಟರಮಣ ಎಂಬಾತನಿಗೆ ವರ್ಗಾಯಿಸುವುದಾಗಿ ಹೇಳಿದ್ದಾನೆ. ಬಳಿಕ ದೀಪಕ್ ಎಂಬ ಹೆಸರಿನ ವ್ಯಕ್ತಿ ಮಹಿಳೆಯ ಮತ್ತು ಅವರ ಗಂಡನ ಬ್ಯಾಂಕ್ ಖಾತೆಯ ವಿವರಗಳನ್ನು ಸಂಗ್ರಹಿಸಿದ್ದಾನೆ.
ಈ ವ್ಯಕ್ತಿಗಳು, ಬ್ಯಾಂಕ್ ಖಾತೆಗಳ ಪರಿಶೀಲನೆಗಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಪಾವತಿಸಿದ ಎಲ್ಲಾ ಹಣವನ್ನು ವಾಪಸ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವಿಷಯವನ್ನು ಯಾರಿಗೂ ತಿಳಿಸದಂತೆ ಹೇಳಿದ್ದಾರೆ. ಮಹಿಳೆಯನ್ನು ಭೀತಿಗೊಳಿಸಿದ್ದರಿಂದ ಅವರು ಯಾರೊಂದಿಗೂ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.
ಜೂನ್ 10ರಿಂದ ಜೂನ್ 27ರವರೆಗೆ, ಮಹಿಳೆ ಮತ್ತು ಅವರ ಗಂಡನ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ ಒಟ್ಟು 3,16,52,142 ರೂಪಾಯಿಗಳನ್ನು ವಂಚಕರು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾಯಿಸಿದ್ದಾರೆ. ನಂತರ, ವಂಚಕರು ಯಾವುದೇ ಸಂಪರ್ಕಕ್ಕೆ ಸ್ಪಂದಿಸದೇ, ಕರೆಗಳನ್ನು ಬ್ಲಾಕ್ ಮಾಡಿದ್ದಾರೆ.
ಮಹಿಳೆ ಭಯಗೊಂಡು ತಮ್ಮ ಮಕ್ಕಳಿಗೆ ಈ ವಿಷಯವನ್ನು ತಿಳಿಸಿದಾಗ, ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್