Breaking
12 Jan 2026, Mon

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಹುಂಚ : ಶ್ರೀಗಂಧ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಸಮಟಗಾರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟುಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ಮತ್ತು ರೇನ್‌ಕೋಟ್ ವಿತರಿಸಲಾಯಿತು.

ಶಾಲೆಯೊಂದಿಗೆ ಹತ್ತು ವರ್ಷದ ನಂಟನ್ನು ನೆನಪಿಸಿಕೊಂಡು ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರು, ದಾನಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯವ್ಯಾಪ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಹರ್ಷದಿಂದ ಎಲ್ಲರೂ ಪ್ರಶಂಸಿಸಿದರು.

ಸಂಸ್ಥೆಯ ರೂವಾರಿಗಳಲ್ಲೊಬ್ಬರಾದ ಸುಂದರೇಶ್ ರವರು ಮಾತನಾಡಿ ಶಾಲೆಯೊಂದಿಗಿನ ಒಡನಾಟವನ್ನು ಮೆಲುಕು ಹಾಕಿ, ಮುಂದಿನ ದಿನಗಳಲ್ಲಿ ಭಾರತದಲ್ಲಿ ಎಲ್ಲರೂ ಉಳ್ಳವರಾಗಿ ಬಡತನ ನಿರ್ಮೂಲನೆಯಾಗಲಿ ಸಶಕ್ತ ಸಮಾಜ ನಿರ್ಮಾಣವಾಗಲಿ ಎಂದು ಹಾರೈಸಿದರು.

ಶ್ರೀಧರಮೂರ್ತಿ ಕಡಸೂರು ಮಾತನಾಡಿ ಸದ್ಗುಣಗಳ ಗಂಧವಾಹಕರಂತಿರುವ ಶ್ರೀಗಂಧ ಫೌಂಡೇಶನ್ ನ ಕಾರ್ಯವ್ಯಾಪ್ತಿಯ ಅಗಾಧತೆ ಕುರಿತು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ದಾನಿಗಳಾದ ಅಭಿನವ್ ಕಲ್ಪನಾ ದಂಪತಿಗಳನ್ನು ಗೌರವಿಸಲಾಯಿತು.

ಶಾಲಾ ಎಸ್ ಡಿ ಎಂಸಿ ಅಧ್ಯಕ್ಷರಾದ ಮೋಹನ್ ಶ್ರೀಗಂಧ ಫೌಂಡೇಶನ್ ನ ಅಧ್ಯಕ್ಷರಾದ ಪ್ರಶಾಂತ್ ಪತಂಗೆ , ನಿಕಟಪೂರ್ವ ಅಧ್ಯಕ್ಷರಾದ ಆನಂದ, ಫೌಂಡೇಶನ್ ನ ಸದಸ್ಯರು , ಮುಖ್ಯಶಿಕ್ಷಕರಾದ ರತ್ನಕುಮಾರಿ ಹಾಗೂ ಶಿಕ್ಷಕ ವೃಂದ ಎಸ್ ಡಿ ಎಂ ಸಿಯ ಸದಸ್ಯರು ಗ್ರಾಮಸ್ಥರು, ಪೋಷಕವೃಂದ, ಹಿರಿಯ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version