Headlines

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ.

ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ.

ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ನಾಯಿಯನ್ನು ಓಡಿಸಿ, ಬಾಲಕನ ರಕ್ಷಣೆ ಮಾಡಿದ್ದಾರೆ.

Exit mobile version