Headlines

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರಾದ ಮೂವರೂ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ ಗ್ರಾಮದವರೆನ್ನಲಾಗುತ್ತಿದ್ದು, ಕೆಲಸದ ನಿಮಿತ್ತ ಬಾಣಾವರಕ್ಕೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Exit mobile version