ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಎ.ಎ. ಸರ್ಕಲ್ ಬಳಿ ಬಸ್ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ.
ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.