ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ.

ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.
2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ ತೀರ್ಪು ನೀಡಿದೆ. ಅಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲ ನಗರದಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಅಂದಿನ ಡಿವೈಎಸ್​ಪಿ ಶಾಂತವೀರ ನೇತೃತ್ವದ ತಂಡ ದಾಳಿ ನಡೆಸಿತ್ತು.

ಪಶ್ಚಿಮ ಬಂಗಾಳ ಮೂಲದ 1) ಅಲೋಕ್ ಮಂಡಲ್ (34), 2) ಶ್ರೀಬಾಷ್ ಸರ್ಕಾರ್ (20), 3) ಅಮ್ರಿತ್ ಮಂಡಲ್ (27), 4) ಸಂಕರ್ ಬ್ಯಾಪಾರಿ (28) ಮತ್ತು 5) ಹರಧನ್ ಮಂಡಲ್ (32) ಎಂಬುವರನ್ನು ಬಂಧಿಸಿದ್ದ ಪೊಲೀಸ್ ತಂಡ ಒಟ್ಟಾರೆ,. 1 ಕೆಜಿ 564 ಗ್ರಾಂ ತೂಕದಗಾಂಜಾ , ₹3550 ನಗದು ಮತ್ತು 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿತ್ತು. ಅಷ್ಟೆ ಅಲ್ಲದೆ,   ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಕಲಂ 20(b)(ii)(B), 27(b) NDPS ಕಾಯ್ದೆ ಅಡಿ ಕೇಸ್ ದಾಖಲಿಸಿತ್ತು.

ಈ ಪ್ರಕರಣ ಸಂಬಂಧ  ಆಗಿನ ತನಿಖಾಧಿಕಾರಿ, ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿ.ಐ. ಅಶ್ವತ್ ಗೌಡ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ  ಸಲ್ಲಿಸಿದ್ದರು.

ಬಳಿಕ ಕೋರ್ಟ್​ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ.ಎಂ. ಅವರು  ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ನೀಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

7 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

11 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

11 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

23 hours ago

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…

1 day ago

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…

1 day ago