Headlines

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ.

ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ರೀತಿ, ಸಾಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದು ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತದೆ.