POSTMANNEWS

ನೈಜ ಸುದ್ದಿ ನೇರ ಬಿತ್ತರ..

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.

About The Author

Exit mobile version