ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು
ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಾಗಪುರದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಸಾಗರಕ್ಕೆ ತೆರಳಿದರು.
ಸಾಗರ ಹೆಲಿಪ್ಯಾಡ್‌ನಿಂದ ಸಿಗಂದೂರಿಗೆ ಪ್ರಯಾಣಿಸಿ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಪೂಜೆ ಸಲ್ಲಿಸಿದರು. ಸೇತುವೆ ಲೋಕಾರ್ಪಣೆಯ ಬಳಿಕ, ಸಾಗರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸೇತುವೆಯ ಬಗ್ಗೆ ಜನಪ್ರತಿನಿಧಿಗಳು ಹರ್ಷ ವ್ಯಕ್ತಪಡಿಸಿ ಸೇತುವೆಯನ್ನು ಅಧಿಕೃತವಾಗಿ ಲೋಕಾಪರ್ಣೆಗೊಳಿಸಿದರು. ಈ ವೇಳೆ ತುಮರಿ ಸಾಗರ ಭಾಗದ ಸಾವಿರಾರು ಮಂದಿ ಉಪಸ್ಥಿತರಿದ್ದರು.
ಈ ಸೇತುವೆಯು ಶರಾವತಿ ಹಿನ್ನೀರಿನಿಂದಾಗಿ ಸಂಪರ್ಕ ಕಳೆದುಕೊಂಡಿದ್ದ ಸಾವಿರಾರು ಜನರ ದಶಕಗಳ ಬೇಡಿಕೆಯಾಗಿದ್ದು, ಮಲೆನಾಡು ಭಾಗದ ಸಂಪರ್ಕ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…