POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

1000250060

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಅಪರಿಚಿತ ವಾಹನವೊಂದು ಬಂದು ಸಚಿನ್ ಸವಾರಾಗಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.