ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ
ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.
ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.
ಸಾಗರದ ತಹಶೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರಿಗೆ ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.ಈ ಸಂಬಂಧ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ರಶ್ಮಿ ಹೆಚ್.ಜೆ. ಅವರು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹೊಸನಗರಕ್ಕೆ ನೂತನ ತಹಶೀಲ್ದಾರ್ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಿವಮೊಗ್ಗದ ಮುಜರಾಯಿ ತಹಶೀಲ್ದಾರ್ ಪ್ರದೀಪ್ ಆರ್. ರವರನ್ನು ಹಾವೇರಿ ಉಪ ನೋಟ ವರ್ಗಾವಣೆ ಮಾಡಲಾಗಿದೆ.

