Headlines

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು ಗ್ರಾಮದ ಕೃಷ್ಣಪ್ಪ ಎಂಬಾತನ ಅಂಗಡಿಯ ಮುಂದೆ 450 ರೂ. ಮೌಲ್ಯದ ಒಟ್ಟು 9 ಮದ್ಯಪೌಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಕೃಷ್ಣಪ್ಪ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿರುವುದು ಶ್ಲಾಘನೀಯವಾಗಿದೆ

Exit mobile version