Breaking
12 Jan 2026, Mon

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು.

ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಹೃದಯಾಘಾತ ಸಾವು ದಿನೇ ದಿನೇ ಏರುತ್ತಿದೆ ಈವರೆಗೂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ಸಂಪುಟದ ಕೆಲವು ಸದಸ್ಯರ ಮೇಲೆ ಭ್ರಷ್ಟಾಚಾರ ನಡೆಸಿದ ಶಾಸಕರು ಮತ್ತು ಮಾಧ್ಯಮದವರು ನಿತ್ಯ ಸುದ್ದಿ ಮಾಡಿದರು ಸಹ ಆಡಳಿತಾತ್ಮಕವಾಗಿ ಯಾವುದೇ ದಿಟ್ಟ ನಿರ್ಧಾರ ಕೈಗೊಳ್ಳುವಲ್ಲಿ ಮುಖ್ಯಮಂತ್ರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ದಿನನಿತ್ಯ ಕುರ್ಚಿಗಾಗಿ ಮುಸುಕಿನ ಗುದ್ದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಅಧಿಕಾರಿಗಳ ಜೊತೆ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಆರ್.ಸಿ.ಬಿ ಯಂತಹ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವೇ ನೇರ ಕಾರಣವಾದರೂ ಕೆಲವು ಅಧಿಕಾರಿಗಳ ಸೇವೆ ವಜಾ ಮಾಡಿದರು ಸಹ ಇದಕ್ಕೆ ನೇರ ಕಾರಣ ಕರ್ತರಾದ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಮುಂದೆ ಕ್ಷಮೆ ಈವರೆಗೂ ಕೋರಲಿಲ್ಲ. ಉಡಾಫೆಯನ್ನು ನೀಡಿ ರಾಜ್ಯದ ಜನತೆಯನ್ನು ಮತ್ತು ಮಡಿದವರ ಕುಟುಂಬವನ್ನು ನಿರ್ಲಕ್ಷಿಸಿದ್ದಾರೆ.

ರಾಜ್ಯದ ಅಭಿವೃದ್ಧಿಯನ್ನು ಸರಿಪಡಿಸಲು ಹಣಕಾಸು ಬಿಕ್ಕಟ್ಟು ಇಬ್ಬರು ಸಹ ಸರಿಪಡಿಸಲು ಪ್ರಯತ್ನಿಸುತ್ತಿಲ್ಲ ಗುತ್ತಿಗೆದಾರರಿಗೆ ಈವರೆಗೂ ಹಣ ಪಾವತಿಸಿಲ್ಲ ರಾಜ್ಯದ ಖಜಾನೆ ಖಾಲಿ ಮಾಡಲು ಗುತ್ತಿಗೆದಾರರಿಗೆ ಅಖಂಡ ನೀತಿಯೇ ಕಾರಣ. 2025-26ನೇ ಸಾಲಿನ ಬಜೆಟ್ ರಾಜ್ಯದಲ್ಲಿ ಮಂಡಿಸಿ ಅನುಮೋದನೆ ನೀಡಿದ ಹಣಕಾಸನ್ನು ಯಾವುದೇ ಇಲಾಖೆ ಯೋಜನೆಗಳಿಗೆ ಈವರೆಗೂ ನೀಡಲಾಗಿಲ್ಲ. ಕಾರಣ ಆರ್ಥಿಕ ಬಿಕ್ಕಟ್ಟು ತಲೆದೋರಿದೆ.

ಮುಂದಿನ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವನ್ನು ನಡೆಸಲು ಆಡಳಿತಾತ್ಮಕ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಹಾಗೂ ಕುರ್ಚಿಯ ಮುಸುಕಿನ ಗುದ್ದಾಟದಿಂದ ಸರ್ಕಾರ ನೈತಿಕವಾಗಿ ನಡೆಸುವ ಸ್ಥೈರ್ಯವಿಲ್ಲದೇ ಇರುವ ಕಾರಣ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಮನೆಗಳ ಹಂಚಿಕೆಯಲ್ಲಿ ವ್ಯಾಪಕವಾಗಿದೆ ಭ್ರಷ್ಟಾಚಾರ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ನೇರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ರವರ ವಿರುದ್ಧ ಆಪಾದನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ಹೊತ್ತಿರುವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ರವರನ್ನು ಮತ್ತು ಎಸ್.ಸಿ.ಎಸ್.ಟಿ ವಾಲ್ಮೀಕಿ ನಿಗಮದ ಅಧ್ಯಕ್ಷ ನಾಗೇಂದ್ರ ರವರನ್ನು ಸಂಪುಟದಿಂದ ವಜಾಗೊಳಿಸದೇ ಮುಂದುವರಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಕಾರಣದಿಂದ ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರನ್ನು ಈ ಮನವಿ ಪತ್ರ ನೀಡುವುದರ ಮೂಲಕ ಕೋರಿದೆ.

ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಎಂ. ವಿ ಜಯರಾಮ್, ಟೌನ್ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ರಾಮಣ್ಣ, ರಮಾನಂದ, ಮೂರ್ತಿ ಕೃಷ್ಣ ಆರ್.ಎನ್ ಮಂಜುನಾಥ್, ಕಾಯಿ ನಾಗೇಶ ಇನ್ನೂ ಮುಂತಾದವರು ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್