ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ
ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನಪು ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ಅಧ್ಯಕ್ಷ ಸುಧೀರ್ ಪಿ , ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ ,ಆರ್ ಎಸ್ ಎಸ್ ತಾಲೂಕ್ ಸಹ ಕಾರ್ಯನಿರ್ವಾಹಕ ಕಾರ್ತಿಕ್ ,ಪ್ರಮುಖರಾದ ಮೆಣಸೆ ಆನಂದ್ , ಸುಂದರೇಶ್ ಕೆರೆಹಳ್ಳಿ , ಪದ್ಮಾ ಸುರೇಶ್ , ನಾಗರತ್ನ ದೇವರಾಜ್ , ರಾಘವೇಂದ್ರ, ಸಂಜಯ್. ಮಂಜುನಾಥ್ , ಲೋಹಿತ್ , ಗಣೇಶ್ ,ಉದಯ್ , ಶಶಿಧರ್ ,ಫ್ಯಾನ್ಸಿ ರಮೇಶ್ , ಮಹಮ್ಮದ್ ಹುಸೇನ್, ರೇಖಾ ರವಿ, ನಾಗರತ್ನ ದೇವರಾಜ್. ಹಾಗು ಇನ್ನೂ ಹಲವಾರು ದೇಶಪ್ರೇಮಿಗಳು ಭಾಗಿಯಾಗಿ ಪುಷ್ಪ ನಮನವನ್ನು ಸಲ್ಲಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್