ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು.
ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ, “ಮಾಜಿ ಸಚಿವರು ಹಾಗೂ ಆತ್ಮೀಯರಾದ ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತ ಅವರಿಗೆ ಆಯುರಾರೋಗ್ಯ ನೀಡಿ, ಸಕಲ ಇಷ್ಟಾರ್ಥಗಳನ್ನು ಈಡೇರಿಸಲಿ” ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು, ಕಿಮ್ಮನೆ ರತ್ನಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.