ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ
ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು ನೀಡುವುದಾಗಿ ಭರವಸೆ ನೀಡಿದ ನಂತರ, ಒಬ್ಬರು ₹2.5 ಲಕ್ಷ ಹಾಗೂ ಇನ್ನೊಬ್ಬರು ₹2.5 ಲಕ್ಷಗಳಷ್ಟು ಮೊತ್ತವನ್ನು ಮುಂಗಡವಾಗಿ ಪಡೆದುಕೊಂಡಿದ್ದಾರೆ .
ಹಣವನ್ನು ಪಡೆದ ನಂತರ ಆರೋಪಿಗಳು ಕಾಳುಮೆಣಸು ಪೂರೈಸದೆ, ಹಣವನ್ನು ಹಿಂದಿರುಗಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮಾಲೀಕರು ದೂರಿನಲ್ಲಿ ತಿಳಿಸಿದ್ದಾರೆ .
ಈ ಸಂಬಂಧ ಅವರು ತೀರ್ಥಹಳ್ಳಿ ಪೊಲೀಸರಿಗೆ ದೂರು ಸಲ್ಲಿಸಿದ್ದಾಗಿ ತಿಳಿದುಬಂದಿದ್ದು, ಪೊಲೀಸರು ಈಗಾಗಲೇ ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…