Breaking
12 Jan 2026, Mon

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ಹರತಾಳು ಹಾಲಪ್ಪನವರ ಬಳಿ ತೆರಳಿ ದೇವಸ್ಥಾನಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾದರೂ ಕೂಡ ಒಂದು ನಯಾ ಪೈಸೆ ಬಿಡುಗಡೆ ಮಾಡದೆ ಕಮಿಟಿಯನ್ನು ಬದಲಾಯಿಸಿದರು. ಅದಕ್ಕೂ ಮುನ್ನ ನಮ್ಮ ವ್ಯವಸ್ಥಾಪನಾ ಸಮಿತಿಯಲ್ಲಿ ಸುಮಾರು 58 ಲಕ್ಷ ರೂ. ಹಣದಿಂದ ಶಿಲಾಮಯ ದೇವಸ್ಥಾನಕ್ಕೆ ನೀಲನಕ್ಷೆ ತಯಾರಿಸಿ ದೇಗುಲಕ್ಕೆ ಬೇಕಾಗುವ ಕಾಮಗಾರಿಯ ಕೆಲಸವೂ ಬರೀ ಸುಳ್ಳು ಹೇಳುತ್ತಿತ್ತು ಸರ್ಕಾರದಿಂದ 1 ಕೋಟಿ ರೂ. ಹಣವನ್ನು ನೀರಾವರಿ ನಿಗಮದಿಂದ ಬಿಡುಗಡೆ ಮಾಡಿ ಸುಳ್ಳು ಹೇಳಿದ್ದಾರೆ. ಬರೀ ಸುಳ್ಳು ಹೇಳಿಕೆಯಿಂದ ಜನರನ್ನು ನಂಬಿಸುವುದನ್ನು ಬಿಟ್ಟು ಹಾಲಿ ಶಾಸಕ ಗೋಪಾಲಕೃಷ್ಣ ಬೇಳೂರುವರು 51 ಕೋಟಿ ರೂ. ಹಣವನ್ನು ವಿವಿಧ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ. ಮಳೆಗಾಲದ ಕಾರಣ ಕಾಮಗಾರಿ ಆರಂಭಗೊಳ್ಳಲು ವಿಳಂಬವಾಗಿದೆ ಸರ್ಕಾರ ಎರಡೂವರೆ ವರ್ಷಗಳಾದರೂ ಮಾಜಿ ಶಾಸಕ ಹರತಾಳು ಹಾಲಪ್ಪ ನಮ್ಮ ಸರ್ಕಾರದ ಅನುದಾನದಿಂದ ನಡೆಸಲಾಗುತ್ತಿದೆ ಎಂದು ಸುಳ್ಳು ಹೇಳಿಕೊಂಡು ಗೋಪಾಲಕೃಷ್ಣ ಬೇಳೂರು ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಸೂಚಿಸಲಾಗಿದೆ.

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಮಾತನಾಡಿ, ನಿರಾವರಿ ನಿಗಮದಿಂದ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸಲಾಯಿತು ಮಾಡಿದ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಸುದ್ದಿಗೋಷ್ಟಿಯಲ್ಲಿ ಹೇಳಿ ಅನುದಾನವನ್ನು ನಮ್ಮ ಶಾಸಕರು ಪತ್ರ ಬರೆದು ವಾಪಾಸ್ ಕಳುಹಿಸಿದ್ದಾರೆಂದು ಹೇಳಿಕೆ. ಆದರೆ ಸರ್ಕಾರ ನೀರಾವರಿ ನಿಗಮಕ್ಕೆ ಬೇರೆಯಾವುದೇ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡದಂತೆ ನಿಗಮಕ್ಕೆ ಸುತ್ತೋಲೆ ಹೊರಡಿಸಿದೆ ಬಗ್ಗೆ ಪ್ರದರ್ಶಿಸಿದರು. ಆದರೆ ಮಾಜಿ ಶಾಸಕ ಹರತಾಳು ಹಾಲಪ್ಪ ಗೋಪಾಲಕೃಷ್ಣ ಬೇಳೂರು ವಿರುದ್ಧ ಅನಾವಶ್ಯಕವಾಗಿ ಟೀಕೆ ಮಾಡುವುದರ ಬಗ್ಗೆ ನಿಲ್ಲಿಸುವಂತೆ ಹೇಳಿ ಶಾಸಕರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಮಾತನಾಡಿ, ಅಮ್ಮನಘಟ್ಟ ದೇವಸ್ಥಾನದ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ದ ಅನಗತ್ಯವಾಗಿ ತೋರಿಸುವುದನ್ನು ಸಹಿಸುವುದಿಲ್ಲ. ಅನವಶ್ಯಕವಾಗಿ ಸಿಗಂದೂರು-ಅಮ್ಮನಘಟ್ಟ ವಿಚಾರವಾಗಿ ಸಲ್ಲದ ಆರೋಪ ಮಾಡುವುದನ್ನು ಕೂಡಲೇ ನಿಲ್ಲಿಸಿ ಎಂದರು.

ಸುದ್ದಿಗೋಷ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪಗೌಡ ಹಾರೋಹಿತ್ತಲು, ಗ್ರಾಮ ಪಂಚಾಯ್ತಿ ಸದಸ್ಯರಾದ ಡಿ.ಈ.ಮಧುಸೂದನ್, ಗಣಪತಿ, ಆಸಿಫ್‌ಭಾಷಾ, ಗ್ಯಾರಂಟಿ ಸಮಿತಿಯ ಅಮ್ಮಿರ್‌ಹಂಜಾ, ರವೀಂದ್ರ ಕೆರೆಹಳ್ಳಿ, ನವೀನ ಕೆರೆಹಳ್ಳಿ, ಬಿ.ಎಸ್.ಎನ್.ಎಲ್, ಶ್ರೀಧರ, ಪ್ರಕಾಶ್ ಪಾಲೇಕರ್, ಪರಮೇಶ್ ಇತರರು ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್