ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.
ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.
ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಖೈದಿಯ ಹೊಟ್ಟೆ ಶಸ್ತ್ರಚಿಕಿತ್ಸೆ ಮಾಡದಿದ್ದರೆ ಸಾವನ್ನಪ್ಪುತಿದ್ದ
ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಆತನ ಹೊಟ್ಟೆಯನ್ನ ಬಗೆದು ಮೊಬೈಲ್ ನ್ನ ಹೊರತೆಗೆಯಲಾಗಿದೆ. ಜೂನ್ 24 ರಂದು ಆತ ಮೊಬೈಲ್ ನುಗಿದ್ದ, ಜೂನ್ 27 ಕ್ಕೆ ಆತನ ಹೊಟ್ಟೆ ಆಪರೇಷನ್ ಮಾಡಿ ಮೊಬೈಲ್ ತೆಗೆಯಲಾಗಿತ್ತು. ಈಗ ಆತ ಮೆಗ್ಗಾನ್ ನಿಂದ ಹುಷಾರಾಗಿ ಹೊಗಿದ್ದಾನೆ. ಮೂರು ದಿನ ಆತನ ಹೊಟ್ಟೆಯಲ್ಲಿದ್ದ ಮೊಬೈಲ್ ಲೀಥಿಯಮ್ ಬ್ಯಾಟರಿ ಒಂದು ವೇಳೆ ಸೋರಿಕೆಯಾಗಿದ್ದರೆ ಆತ ಸಾಯುತ್ತಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…