
ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ
ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…