Headlines

ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ

ಬಸ್ ಮತ್ತು ಲಾರಿ ಅಪಘಾತ – ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ

ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ.

ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಇದೀಗ ಗಾಯಾಳು ಪ್ರಯಾಣಿಕರೊಬ್ಬರು ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ಚಾಲಕ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಇತರೆ ಪ್ರಯಾಣಿಕರು ತಮ್ಮ ಮೇಲೆ ಬಿದ್ದ ಪರಿಣಾಮ ತಮ್ಮ 12 ಹಲ್ಲುಗಳು ಮುರಿದು ಹೋಗಿವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಅಪಘಾತಕ್ಕೆ ಕಾರಣನಾದ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಆನಂದಪುರ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.