ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ
ರಿಪ್ಪನ್ ಪೇಟೆ : ಮನೆಯಿಂದ ಹೊರಗೆ ಹೋದ ವ್ಯಕ್ತಿ ಮೂರು ದಿನಗಳಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಿತ್ತಲು ಸಮೀಪದ ಸಾರಗನಜಡ್ಡು ಗ್ರಾಮದ ನಿವಾಸಿ ಬಸಪ್ಪ(69) ಎಂಬುವವರು 12-07-2025 ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆ ಗೆ ಕರೆ ಮಾಡಲು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇವರು ಸುಮಾರು 5.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಹುಟ್ಟಿನಿಂದ ಬುದ್ದಿಮಾಂದ್ಯರಾಗಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ.
ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ರಿಪ್ಪನ್ ಪೇಟೆ ಪೊಲೀಸ್ ಠಾಣೆ ದೂ.ಸಂ 9480803365 – 9972721268 ನಂಬರ್ ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
About The Author
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]