Headlines

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು

{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“border”:1},”is_sticker”:false,”edited_since_last_sticker_save”:true,”containsFTESticker”:false}

ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ ಕೃಷ್ಣಮೂರ್ತಿ ಎನ್.ಬಿ. ಇವರಿಗೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಅದ್ಧೂರಿಯಾಗಿ ಗ್ರಾಮಸ್ಥರು, ಅಭಿಮಾನಿಗಳು ಸ್ವಾಗತಿಸಿ ಶುಭ ಹಾರೈಸಿದರು.

ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಯೋಧ ಕೃಷ್ಣಮೂರ್ತಿ ಎನ್.ಬಿ. ಇವರನ್ನು ರಿಪ್ಪನ್ ಪೇಟೆ ವಿನಾಯಕ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಕರೆತರಲಾಯಿತು ಈ ಸಂಧರ್ಭದಲ್ಲಿ ವಿವಿಧ ಸಂಘ ಸಂಸ್ಥೆಯವರು  ನಿವೃತ್ತ ಯೋಧ ಸುಬೇದಾರ್ ಕೃಷ್ಣ ಮೂರ್ತಿ ರವರಿಗೆ ಗೌರವಿಸಿ ಸನ್ಮಾನಿಸಿದರು.

ಮಾರ್ಗ ಮಧ್ಯದಲ್ಲಿ ಅನೇಕ ಯುವಕರು ಯೋಧನಿಗೆ ಹೂಮಾಲೆ ಹಾಕಿ ಅವರಿಗೆ ಗೌರವದ ವಂದನೆ ಸಲ್ಲಿಸುತ್ತಿದ್ದರು. ಇನ್ನು ಅನೇಕ ಮಹಿಳೆಯರು ತಮ್ಮ ಪುಟ್ಟ ಪುಟ್ಟ ಮಕ್ಕಳನ್ನು ಯೋಧನ ಕೈಗೆ ಕೊಟ್ಟು ಹರ್ಷ ಪಡುತ್ತಿದ್ದರು. ನಂತರ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಭವ್ಯ ಸ್ವಾಗತ ಮಾಡುವುದರೊಂದಿಗೆ ನಿವೃತ್ತಿ ಜೀವನಕ್ಕೆ ಶುಭಕೋರಿದರು.

ವಿನಾಯಕ ವೃತ್ತದಲ್ಲಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ನಿವೃತ್ತ ಯೋಧ ಕೃಷ್ಣಮೂರ್ತಿಯವರನ್ನು ಸ್ವಾಗತಿಸಿ ಅಭಿನಂದಿಸಿ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಲೆಂದು ಹಾರೈಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ನಿವೃತ್ತ ಸೈನಿಕ ಸುಬೇದಾರ್ ಕೃಷ್ಣಮೂರ್ತಿ ಹೆತ್ತ ತಾಯಿ ಹಾಗೂ ಜನ್ಮ ಪಡೆದ ದೇಶದ ಋಣವನ್ನು ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಬರೀ ಅವರ ಸೇವೆಯನ್ನಷ್ಟೆ ನಾವು ಮಾಡಬಹುದು. ನಾನು ಕಳೆದ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದೇನೆ. ಇವತ್ತು ಗ್ರಾಮಸ್ಥರು ನೀಡಿದ ಸ್ವಾಗತ ಹೃದಯ ತುಂಬಿದೆ. ಇದಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ. ಇಷ್ಟು ವರ್ಷ ಗಡಿಯಲ್ಲಿ ದೇಶ ಸೇವೆ ಮಾಡಿದ್ದೇನೆ. ಈಗ ಊರಲ್ಲಿ ಜಮೀನಿನಲ್ಲಿ ಕೃಷಿಕನಾಗಿ ಕೆಲಸ ಮಾಡುತ್ತೇನೆ. ಗಡಿ ಸೇವೆಯ ಬಳಿಕ ಭೂತಾಯಿ ಸೇವೆಗೆ ಅಣಿಯಾಗಲಿದ್ದೇನೆ ಎಂದರು.

ನಂತರದಲ್ಲಿ ಮೆರವಣಿಗೆ ಮೂಲಕ ಸ್ವಗ್ರಾಮ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾಮನಗದ್ದೆ ಗ್ರಾಮಕ್ಕೆ ಕರೆದೊಯ್ಯಲಾಯಿತು.

ಈ ಸಂದರ್ಭದಲ್ಲಿ ಬಿಎಸ್ ಎನ್ ಡಿಪಿ ರಾಜ್ಯ ಕಾರ್ಯದರ್ಶಿ ಲೇಖನಾ ಚಂದ್ರನಾಯ್ಕ್ , ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾ ಘಟಕದ ಆಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಸುಶೀಲ ಮೂಡಾಗ್ರೆ, ಸೀತ ರಾಜಪ್ಪ, ಇನ್ನಿತರರು ಪಾಲ್ಗೊಂಡಿದ್ದರು.