ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ.
ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ ಸವಾರರು ವಾಹನ ಚಲಿಸಲು ಭಯಭೀತರಾಗಿದ್ದಾರೆ.
ಆಯನೂರು – ಮಾಳೂರು ಮುಖ್ಯ ರಸ್ತೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ವೇಳೆ ರಸ್ತೆ ಬದಿಯಲ್ಲಿ ದೊಡ್ಡದಾದ ಟ್ರೆಂಚ್ ಗಳನ್ನು ಹೊಡೆದಿದ್ದು ಜುಲೈ 22 ರ ಸಂಜೆ 6 ಗಂಟೆಯ ಹೊತ್ತಿಗೆ ರಸ್ತೆ ಕುಸಿದಿದ್ದು. ಹಣಗೆರೆ ಗ್ರಾಮ ಪಂಚಾಯತಿ ಸಿಬ್ಬಂದಿ ಮಣಿಕಂಠ ಎಸ್ ಡಿ ತಕ್ಷಣ ಪಿ ಡಿ ಓ ಅಧಿಕಾರಿ & ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಕರೆ ಮಾಡಿ ತಿಳಿಸಿತಕ್ಷಣ ಬ್ಯಾರಿಕೆಡ್ ಹಾಕಲಾಯಿತು.
ಈ ಬಗ್ಗೆ ಮೌನ ವಹಿಸಿರುವ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ತೀರ್ಥ ಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರರಿಗೆ ಸ್ಥಳೀಯರು ಅಕ್ರೋಶ ಹೊರ ಹಾಕಿದ್ದಾರೆ. ತಕ್ಷಣ ಸ್ಪಂದಿಸಿ ರಸ್ತೆ ಸರಿ ಪಡಿಸಲು ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್