ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ.

ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50 ಬಾಳೆ ಗಿಡವನ್ನು ನೆಟ್ಟಿದ್ದರು. ಹಾಡಿಕೇವಿ ಈಶ್ವರ ಎಂಬುವವರು 250 ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನೆಟ್ಟಿದ್ದರು.

ರಾಮಪ್ಪ ಹಾಗೂ ಈಶ್ವರ ಎಂಬುವವರು ಫಾರಂ ನಂಬರ್  53/57 ಅರ್ಜಿ ಸಲ್ಲಿಸಿದ್ದರು. ಅರ್ಜಿ ಇತ್ಯರ್ಥ ಬಾಕಿ ಇರುವಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಮಾಡಿದ್ದಾರೆ. ಇದಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅರಣ್ಯ ಭೂಮಿ ಸಾಗುವಳಿ ಕುರಿತು 2017 ರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶರಾವತಿ ಮುಳುಗಡೆ ಸಂತ್ರಸ್ಥರಾದ ನಿಡುಗೋಡು ರಾಮಪ್ಪ ಹಾಗೂ ಈಶ್ವರ ಎಂಬುವವರ ಮೇಲೆ ಪ್ರಕರಣ ದಾಖಲಿಸಿದ್ದರು. ಅರಣ್ಯ ಇಲಾಖೆ ಪ್ರಕರಣವನ್ನು ಪ್ರಶ್ನಿಸಿ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ರೈತರನ್ನು ಅರೋಪ ಮುಕ್ತ ಮಾಡಿತ್ತು ಎಂದು ಸಂತ್ರಸ್ಥ ರೈತ ನಿಡಗೋಡು ರಾಮಪ್ಪ ತಿಳಿಸಿದರು.

ಸಾಗುವಳಿ ಭೂಮಿಯಲ್ಲಿ ಶುಂಠಿ,ಜೋಳ,ಭತ್ತ ಬೆಳೆಯುತ್ತಿದ್ದೆವು.ಪ್ರಸ್ತುತ ಅಡಿಕೆ,ಕಾಫಿ,ಬಾಳೆ,ತಾಳೆ ಗಿಡ ಹಚ್ಚಿದ್ದೆವು.ಈಗ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳು ಸಾಗುವಳಿ ಭೂಮಿಯಲ್ಲಿ ನೆಟ್ಟಿದ್ದ ಗಿಡಗಳನ್ನು ತೆರವು ಮಾಡಿದ್ದಾರೆ.ಆಗಿರುವ ಬೆಳೆ ನಷ್ಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತುಂಬಿಕೊಡಬೇಕು ಎಂದು ಸಂತ್ರಸ್ಥ ರೈತ ಸುಧಾಕರ್ ನಿಡಗೋಡು ಆಗ್ರಹಿಸಿದ್ದಾರೆ.

ಸಾಗುವಳಿ ಮಾಡುತ್ತಿದ್ದ ಜಾಗಕ್ಕೆ  ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವು. ಆದರೆ ಅರ್ಜಿ ವಿಚಾರಣೆ ಬಾಕಿ ಇರುವಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಜಾಗ ತೆರವು ಮಾಡಿದ್ದಾರೆ ಎಂದು ಸುಧಾಕರ್ ಮತ್ತು ನಾಗರಾಜ್ ಆರೋಪಿಸಿದ್ದಾರೆ.

ಶಾಸಕರ ಸೂಚನೆಗೆ ಮನ್ನಣೆ ನೀಡಿಲ್ಲ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ಪ್ರಯತ್ನ ಶೀಲರಾಗಿರುವಾಗಲೇ ಅವರದೇ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸ್ಥಳೀಯ ಶಾಸಕಿ ಶಾರದಾಪೂರ್ಯನಾಯ್ಕ ಮತ್ತು ಸಚಿವರ ಸೂಚನೆ ಇದ್ಯಾಗ್ಯೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಳೆ ತೆರವು ಮಾಡಿದ್ದಾರೆ ಎನ್ನಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

11 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

11 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

12 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

16 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

16 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

16 hours ago