ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ
ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ ಶಕ್ತಿ, ನವ ಚೈತನ್ಯವನ್ನು ಒದಗಿಸುವ ನಿರೀಕ್ಷೆಯಿದೆ.
ರಿಪ್ಪನ್ ಪೇಟೆಯ ಮೇರಿಮಾತ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಶ್ವೇತಾ ಬಂಡಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಐದು ವರ್ಷಗಳ ಕಾಲ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳಾ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಅವರು ಇದೀಗ ಜಿಲ್ಲಾ ಮಹಿಳಾ ಘಟಕದ ನೇತೃತ್ವ ವಹಿಸುತ್ತಿರುವುದು ಪಕ್ಷದ ಬಲವರ್ಧನೆಗೆ ನಾಂದಿಯಾಗಲಿದೆ.
ಶ್ವೇತಾ ಬಂಡಿಯವರು ಖ್ಯಾತ ವಕೀಲ ಭರತ್ ಎಂ ಅವರ ಪತ್ನಿ ಆಗಿದ್ದಾರೆ. ಈ ಸ್ಥಾನಕ್ಕೆ ಈ ಹಿಂದೆ ಜಿಪಂ ಮಾಜಿ ಸದಸ್ಯೆ ಅನಿತಾ ಕುಮಾರಿಯವರು ಅಧ್ಯಕ್ಷರಾಗಿದ್ದರು.
ಶ್ವೇತಾ ಬಂಡಿ ರಾಜಕೀಯ ಮತ್ತು ಸಾಮಾಜಿಕ ಹಿನ್ನಲೆಯಲ್ಲಿ ಜನಮನ ಗೆದ್ದವರು. ತಮ್ಮ ಜಿಲ್ಲಾ ಪಂಚಾಯತ್ ಸದಸ್ಯರ ಗ್ರಾಮೀಣ ಪ್ರದೇಶದ ಅಭಿವೃದ್ಧಿ, ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದಾರೆ.
ನೇಮಕವನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹರ್ಷದಿಂದ ಸ್ವಾಗತಿಸಿದ್ದಾರೆ. ವಿವಿಧ ಸ್ಥಳೀಯ ಘಟಕಗಳು, ಯುವ ಮತ್ತು ಮಹಿಳಾ ಘಟಕದ ನಾಯಕರಿಂದ ಅಭಿನಂದನೆಗಳು ಹರಿದು ಬರುತ್ತಿವೆ. ಈ ನೇಮಕದಿಂದ ಜಿಲ್ಲಾ ಮಹಿಳಾ ನಾಯಕತ್ವಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ಶ್ವೇತಾ ಬಂಡಿಯವರ ತಂದೆ ರಾಮಚಂದ್ರ ಬಂಡಿ ಜಿಪಂ ಮಾಜಿ ಸದಸ್ಯರು ಹಾಗೂ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದರೆ, ಪಕ್ಷದಿಂದ ವಿವಿಧ ಹುದ್ದೆಗಳಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಜಿಲ್ಲಾ ಮಹಿಳಾ ಅಧ್ಯಕ್ಷರನ್ನಾಗಿ ನೇಮಕಗೊಂಡಿರುವ ಶೇತಾ ಆರ್ ಬಂಡಿ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು.