ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ ಬಹಳಷ್ಟು ಉಪಯುಕ್ತವಾಗಲಿದೆ. ಆದರೆ ಬಿಜೆಪಿಯವರು ಈ ಲೋಕಾರ್ಪಣೆ ಕಾರ್ಯಕ್ರಮವನ್ನು ತಮ್ಮ ಪಕ್ಷದ ಕಾರ್ಯಕ್ರಮವಾಗಿ ನಡೆಸುತ್ತಿದ್ದಾರೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ನನಗೆ ಇಲ್ಲಿಯವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ. ಸಂಸದ ಬಿವೈ ರಾಘವೇಂದ್ರ ಅವರು ಪ್ರತಿದಿನ ಬಂದು ಪೆಂಡಾಲ್ ಹಾಗೂ ಸೇತುವೆಯನ್ನು ಪರಿಶೀಲಿಸಿ ಹೋಗುತ್ತಾರೆ, ಆದರೂ ನನಗೆ ಆಹ್ವಾನ ಪತ್ರಿಕೆ ಕೊಟ್ಟಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ನಿತಿನ್ ಗಡ್ಕರಿ ಹಾಗೂ ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದರಿಂದ ನಾವೇನು ರಾಜಕಾರಣ ಮಾಡುವುದಿಲ್ಲ. ನಾನು ಸೇತುವೆ ಉದ್ಘಾಟನೆಗೆ ಹೋಗುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದರು. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಒತ್ತಿ ಹೇಳಿದರು. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರಿಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ತಿಳಿದುಬಂದಿದೆ ಎಂದೂ ಅವರು ತಿಳಿಸಿದರು.

ಸೇತುವೆಯ ನಾಮಕರಣದ ಕುರಿತು ಮಾತನಾಡಿದ ಬೇಳೂರು ಗೋಪಾಲಕೃಷ್ಣ, “ಸೇತುವೆಗೆ ಸಿಗಂದೂರು ದೇವಿ ಹೆಸರನ್ನೇ ಇಡಬೇಕು. ಬೇರೆ ಹೆಸರಿಡಲು ಪ್ರಯತ್ನಿಸಿದರೆ ಅಲ್ಲಿ ಬೋರ್ಡ್ ಹಾಕಲು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ಯಡಿಯೂರಪ್ಪ ಅವರೇ ದೇವಸ್ಥಾನದಲ್ಲಿ ದೇವಿ ಹೆಸರಿಡಬೇಕು ಎಂದು ಹೇಳಿದ್ದರಿಂದ, ಅದೇ ಹೆಸರನ್ನೇ ಇಡಬೇಕು ಎಂದು ಅವರು ಒತ್ತಾಯಿಸಿದರು.

ಶಾಸಕ ಹಾಲಪ್ಪ ಕುರಿತು ತೀವ್ರ ವಾಗ್ದಾಳಿ ನಡೆಸಿದ ಗೋಪಾಲಕೃಷ್ಣ ಶರಾವತಿ ಹಿನ್ನೀರಿನಲ್ಲಿ ಹಾಲಪ್ಪ ಅವರ ಕಡೆಯವರು ಯಾರೂ ಮುಳುಗಿಲ್ಲ. ಹಾಲಪ್ಪ ಬರೀ ಬೊಗಳೆ ಬಿಡುತ್ತಾರೆ. ಅವರ ಕುಟುಂಬದವರು ಯಾರೂ ಅಲ್ಲಿ ಮುಳುಗಡೆ ಆಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. “ನಾನು ಎಂ.ಎಲ್.ಎ. ಆಗಿದ್ದಾಗಲೇ ಯಡಿಯೂರಪ್ಪ ಸಿಎಂ ಆಗಿದ್ದಾಗ ನನ್ನ ಪತ್ರದ ಮೇಲೆಯೇ 100 ಕೋಟಿ ರೂ. ಅನುದಾನ ಕೊಟ್ಟಿದ್ದರು. ಆಗ ಹಾಲಪ್ಪ ಹಾಗೂ ಇದೇ ರಾಘವೇಂದ್ರ ಅವರು ಸಿಗಂದೂರು ಸೇತುವೆ ಆಗಬೇಕು ಎಂದು ಹಸಿರುಮಕ್ಕಿ ಸೇತುವೆ ಕಾಮಗಾರಿ ನಿಲ್ಲಿಸಿದ್ದರು” ಎಂದು ಗಂಭೀರ ಆರೋಪ ಮಾಡಿದರು. ಸೇತುವೆ ನಿರ್ಮಾಣವು ಯಡಿಯೂರಪ್ಪ ಅವರ ಕಲ್ಪನೆಯಾಗಿತ್ತು ಎಂದೂ ಅವರು ಸ್ಪಷ್ಟಪಡಿಸಿದರು.

ಸೇತುವೆ ನಿರ್ಮಾಣದಿಂದ ಸ್ಥಳೀಯ ಜನರಿಗೆ ಬಹಳ ಉಪಯೋಗವಾಗಿದ್ದು, ಈ ಹಿಂದೆ ಓಡಾಡಲು ತುಂಬಾ ತೊಂದರೆ ಇತ್ತು, ಈಗ ಬಹಳ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ, “ನಾವು ಕೂಡ ಹಸಿರುಮಕ್ಕಿ ಸೇತುವೆ ಉದ್ಘಾಟನೆಗೆ ಸಿಎಂ, ಡಿಸಿಎಂ ಅವರನ್ನೂ ಕರೆಸಿ ರಾಜಕಾರಣ ಮಾಡುತ್ತೇವೆ ಎಂದರು.

ದೇಶದ ಸಂಪನ್ಮೂಲ ಕೆಲವರಲ್ಲಿದೆ  ಎಂಬ ಕಾಳಜಿ ಇರುವ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ಪ್ರಧಾನಿ ಆಗಬೇಕು. ಆರ್ ಎಸ್ ಎಸ್ ನ ಸರಸಂಚಾಲಕ ಮೋಹನ್ ಭಾಗವತ್ ಅವರು 75 ವರ್ಷ ಆದ ಶಾಸಕರು, ಸಚಿವರಿಗೆ ಸ್ಥಾನಬಿಟ್ಟುಕೊಡಿ ಎಂದಿದ್ದಾರೆ. ಮೋದಿ ಅವರಿಗೂ 75 ವರ್ಷ ಆಗಿದೆ ಅವರ ಬಗ್ಗೆ ಚಕಾರ ಎತ್ತುತ್ತಿಲ್ಲ ಯಾಕೆ?  ಬಿಎಸ್ ವೈಗೆ ಕಣ್ಣೀರು ಹಾಕಿಸಿದ್ರಲ್ಲ ಎಂದು ಪ್ರಶ್ನಿಸಿದ ಅವರು ಹಾಗಾಗಿ ಮೋದಿ ಅವರನ್ನ ಅವರು ಇಳಿಸುತ್ತಾರೋ ಬಿಡುತ್ತಾರೋ ಅವರಿಗೆ ಬಿಟ್ಟಿದ್ದು. ಅವರ ನಂತರ ಪ್ರಧಾನಿ ರೇಸ್ ನಲ್ಲಿ ಗಡ್ಕರಿ ಇದ್ದಾರೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

4 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

21 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

21 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

23 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago