PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ
ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಮತ್ತು ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಿದರೆ ಯಾವುದೇ ಹಿನ್ನಲೆ ಅಡ್ಡಿಯಾಗದು. ಪೋಷಕರು ಮಕ್ಕಳ ಆಸಕ್ತಿಗೆ ತಕ್ಕಂತೆ ಬೆಂಬಲ ನೀಡಬೇಕು, ಅದೇ ಅವರು ಮುಂದುವರೆಯುವ ಮಾರ್ಗ” ಎಂದು ಹೇಳಿದರು.
ಅವರು ತಂತ್ರಜ್ಞಾನದ ನಿಯಮಿತ ಬಳಕೆ, ಮಾರ್ಗದರ್ಶನದ ಮಹತ್ವ ಹಾಗೂ ಪೋಷಕರ ಪ್ರೋತ್ಸಾಹವನ್ನು ವಿದ್ಯಾರ್ಥಿಗಳ ಯಶಸ್ಸಿಗೆ ಪ್ರಮುಖ ಅಂಶಗಳಾಗಿದೆ ಎಂದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಂಟಿ ಕಾರ್ಯದರ್ಶಿ ಪದ್ಮ ಸುರೇಶ್ ಮಾತನಾಡಿ,ಶುಭಾ ರಾವ್ ಅವರ ಸಾಧನೆಯ ಹಿಂದಿರುವ ಪರಿಶ್ರಮ ಹಾಗೂ ಓದಿನ ಮೇಲೆ ತೀವ್ರ ಆಸಕ್ತಿ ನಮಗೆ ಸ್ಪಷ್ಟವಾಗಿದೆ. ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು, ಮುಂದಿನ ಪೀಳಿಗೆಯವರಿಗೆ ಪ್ರೇರಣೆಯಾದಂತೆ” ಎಂದು ಹೇಳಿದರು.
ಸನ್ಮಾನಿತರ ಪೋಷಕರಾದ ಅಶ್ವತ್ ಎಸ್. ಮತ್ತು ಶೋಭಾ ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬ್ರಾಹ್ಮಣ ಸಮಾಜದ ಪದಾಧಿಕಾರಿಗಳಾದ ಅಮಿತಾ ಬಲ್ಲಾಳ್ (ಕಾರ್ಯದರ್ಶಿ), ಪುರಾಣಿಕ್ ಮತ್ತು ವಾಸುದೇವ ಮಂಗಳೂರ್ಕರ್ (ಉಪಾಧ್ಯಕ್ಷರು), ಶಿವಾನಂದ (ಖಜಾಂಚಿ), ಸವಿತಾ ರಾಧಾಕೃಷ್ಣ ಮತ್ತು ಸೌಮ್ಯ ಅರುಣ್ ಕುಮಾರ್ (ಸಹ ಕಾರ್ಯದರ್ಶಿಗಳು) ಹಾಗೂ ಸಮಾಜದ ಹಲವು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಮಾರಂಭವು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ, ಮುಂದಿನ ಪೀಳಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಮುಖ ವೇದಿಕೆಯಾಗಿದ್ದು, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಮಾಜದ ಪಾತ್ರವನ್ನು ಎತ್ತಿ ತೋರಿಸಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್