ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು.

ಅರಸಾಳು ಸರ್ಕಾರಿ ಪ್ರೌಢಶಾಲೆ ಅರಸಾಳು ಇಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ, ದಿ-30/06/2025 ರಂದು ವಯೋನಿವೃತ್ತಿ ಹೊಂದಿರುವ ಅನ್ನಪೂರ್ಣ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ ಶಿಕ್ಷಕ ವೃತ್ತಿಯು ಪವಿತ್ರವಾದುದು ಮತ್ತು ಶಿಕ್ಷಕರು ತಮ್ಮ ಬಳಿಗೆ ಬರುವ ಪ್ರತಿಯೊಂದು ಮಗುವಿನಲ್ಲೂ ಹೊಸತನವನ್ನು ಕಾಣುವರು. ತಾನು ಶಿಕ್ಷಕ ವೃತ್ತಿ ಪ್ರಾರಂಭಿಸಿದಗಿನಿಂದ ತನ್ನ ನಿವೃತ್ತಿಯವರೆಗೆ ತನ್ನ ಬಳಿ ಬರುತ್ತಿರುವ ಪ್ರತಿಯೊಂದು ವಿದ್ಯಾರ್ಥಿಯಲ್ಲೂ ತನ್ನ ಮಕ್ಕಳನ್ನು ಕಾಣುವ ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಕರಿಬಸಪ್ಪ, ಮುಖ್ಯ ಶಿಕ್ಷಕರಾದ ಸರಿತಾ, SDMC ಅಧ್ಯಕ್ಷ ಜಯರಾಜ್, ನೌಕರ ಸಂಘದ ಅಧ್ಯಕ್ಷ ಸೋಮಶೇಖರ್ B P, ಪ್ರೌಢಶಾಲಾ ಸಂಘ ಅಧ್ಯಕ್ಷರಾದ  ರೇಣುಕೇಶ್, ಸದಸ್ಯರುಗಳು, ಪ್ರೌಢಶಾಲೆಯ ಎಲ್ಲಾ ಶಿಕ್ಷಕರು, ಅರಸಾಳು ಕ್ಲಸ್ಟರ್ ನ ಪ್ರಾಥಮಿಕ ಶಾಲಾ ಶಿಕ್ಷಕರು, SDMC ಸದಸ್ಯರು, ಪೋಷಕರು, ಗ್ರಾಮಸ್ಥರು ಭಾಗವಹಿಸಿ, ಅವರ ಉತ್ತಮ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿವೃತ್ತಿ ಜೀವನ ಸುಖವಾಗಿರಲೆಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರ  ಪತಿ ಅಶೋಕ್, ಮಕ್ಕಳಾದ ಭರತ್ ಮತ್ತು ಶರತ್ ಮತ್ತು ಕುಟುಂಬ ವರ್ಗದವರು ಭಾಗವಹಿಸಿದ್ದರು.

ಅಪರೂಪದ ಮಾದರಿ ಶಿಕ್ಷಕಿ ಅನ್ನಪೂರ್ಣ

ಹೊಸನಗರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಅರಸಾಳು ಇಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ, ದಿ-30/06/2025 ರಂದು ವಯೋನಿವೃತ್ತಿ ಹೊಂದಿರುವ ಶ್ರೀಮತಿ ಅನ್ನಪೂರ್ಣ ರವರು ಅಪರೂಪದ ವ್ಯಕ್ತಿತ್ವ ಹೊಂದಿರುವ ಶಿಕ್ಷಕರು. 13 ವರ್ಷಗಳ ಕಾಲ ಸತತವಾಗಿ ಕನ್ನಡ ಭಾಷೆಯಲ್ಲಿ ಹತ್ತನೆಯ ತರಗತಿಯಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ತಂದುಕೊಟ್ಟವರು. ಹಾಗೆಯೇ ಶಾಲೆಯ ಮಕ್ಕಳಿಗೆ 2024-25 ನೇ ಸಾಲಿನಲ್ಲಿ ಮೂವತ್ತೈದು ಸಾವಿರ ರೂಪಾಯಿ ಖರ್ಚು ಮಾಡಿ ಉಚಿತ ಪ್ರವಾಸ ಮಾಡಿಸಿದ್ದರು. 2025-26 ನೇ ಸಾಲಿನಲ್ಲಿ 40 ಸಾವಿರ ವೆಚ್ಚದಲ್ಲಿ ಶಾಲೆಗೆ ಸುಣ್ಣ ಬಣ್ಣಗಳನ್ನು ಮಾಡಿಸಿದ್ದಾರೆ.

ಮಳೆಗಾಲದಲ್ಲಿ ಮಕ್ಕಳಿಗೆ ಅನುಕೂಲವಾಗಲೆಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಛತ್ರಿಯನ್ನು ಕೊಡುಗೆಯಾಗಿ ನೀಡಿದರು. ಮಕ್ಕಳಿಗೆ ಕುಡಿಯುವ ನೀರಿಗಾಗಿ 15 ಸಾವಿರ ರೂಪಾಯಿ ವೆಚ್ಚದಲ್ಲಿ ನೀರಿನ syntax ನ ವ್ಯವಸ್ಥೆಯನ್ನು ಮಾಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

5 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago