Headlines

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ.

ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ.

ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

​ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.