SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ ವೇದನೆಯಿಂದಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸುಮಾರು ಏಳು ತಿಂಗಳ ಗರ್ಭಧಾರಣೆಯ ನಂತರ ಜನಿಸಿದ ಶಿಶುವಿನ ತೂಕ 1.8 ಕೆ.ಜಿ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದ ತಕ್ಷಣ ತಾಯಿ ಮತ್ತು ಮಗುವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೂ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.
ಇದೀಗ ವಿಷಯವನ್ನು ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ಬಾಲಕಿಯ ಆರೋಗ್ಯ ಸ್ಥಿತಿ ಮತ್ತು ಮುಂದಿನ ಕ್ರಮಗಳ ಕುರಿತು ಪರಿಶೀಲನೆ ನಡೆಸಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…