January 11, 2026

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ.

ಘಟನೆಯಲ್ಲಿ ಕಾರು ಚಾಲಕ ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಆನಂದಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

About The Author